ನೀಟ್ ಪರೀಕ್ಷೆ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ನಿತೇಶ್ ಗೆ 564 ಅಂಕ

ಕುಂದಾಪುರ: ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಿತೇಶ್ 564 ಅಂಕಗಳನ್ನು ಪಡೆದು ಅರ್ಹತೆ ಪಡೆದಿದ್ದಾನೆ.

ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು ಅಭಿನಂದಿಸಿದ್ದಾರೆ.