ಉಡುಪಿ: ನ. 4 ಮತ್ತು 5 ರಂದು ಬೆಂಗಳೂರಿನ ವಿಜಯನಗರ ಸ್ವಿಮ್ಮಿಂಗ್ ಪೂಲ್ ನಲ್ಲಿ ಕರ್ನಾಟಕ ಸ್ವಿಮ್ಮಿಂಗ್ ಅಸೋಸಿಯೇಷನ್ ಆಯೋಜಿಸಿರುವ 24ನೇ ರಾಜ್ಯಮಟ್ಟದ ಮಾಸ್ಟರ್ಸ್ ಸ್ವಿಮ್ಮಿಂಗ್ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಬಾರಕೂರು ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಶ್ರೀಧರ ಉಳಿತ್ತಾಯ ಇವರು ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಪಡೆದು ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಇವರು 100 ಮೀಟರ್ ಬಟರ್ ಫ್ಲೈ ನಲ್ಲಿ ಚಿನ್ನದಪದಕ,100 ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಚಿನ್ನದ ಪದಕ, 50 ಮೀಟರ್ ಬಟರ್ ಫ್ಲೈನಲ್ಲಿ ಬೆಳ್ಳಿ ಪದಕ, ರಿಲೇಗಳಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಸಾಲಿಗ್ರಾಮ ನಿವಾಸಿಯಾಗಿದ್ದು ಸಾಲಿಗ್ರಾಮ ಸ್ವಿಮ್ಮಿಂಗ್ ಕ್ಲಬ್ಬಿನ ಸದಸ್ಯರಾಗಿದ್ದಾರೆ ಹಾಗೂ ಆಸಕ್ತರಿಗೆ ಈಜು ತರಬೇತಿಯನ್ನು ನೀಡುತ್ತಿದ್ದಾರೆ.