ಕಾರ್ಕಳ: ಜೆಡಿಎಸ್ ಪಕ್ಷದ ಕಾರ್ಕಳ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ ಪೂಜಾರಿ ಕೆ. ಅವರು ಆಯ್ಕೆಯಾಗಿದ್ದಾರೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ . ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರ ಶಿಫಾರಸ್ಸಿನ ಮೇರೆಗೆ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಅವರು ಶ್ರೀಕಾಂತ್ ಅವರನ್ನು ನೇಮಕಗೊಳಿಸಿದ್ದಾರೆ.
ಶ್ರೀಕಾಂತ್ ಅವರು ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಕಾರ್ಕಳ ತಾಲ್ಲೂಕು ಕೆಡಿಪಿ ಸದಸ್ಯರಾಗಿದ್ದು, ಜೆಡಿಎಸ್ ಕಾರ್ಕಳ ಕಾರ್ಯಾಧ್ಯಕ್ಷರಾಗಿದ್ದರು. ಅಲ್ಲದೆ, ಹೆಬ್ರಿ ಪರಿಸರದಲ್ಲಿ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.