ಶ್ರೀಕೃಷ್ಣ ಮಠಕ್ಕೆ ನೂತನ ಜಿಲ್ಲಾಧಿಕಾರಿ ಜಿ.ಜಗದೀಶ್ ಭೇಟಿ

ಉಡುಪಿ:ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಜಿ.ಜಗದೀಶ್ ಅವರು ಮಂಗಳವಾರ  ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಅದಮಾರು ಕಿರಿಯ ಶ್ರೀಈಶಪ್ರಿಯ ತೀರ್ಥಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಈ ಸಂದರ್ಭದಲ್ಲಿ ಶ್ರೀಪಾದರ ಕಾರ್ಯದರ್ಶಿ ಗಿರೀಶ್ ಉಪಾದ್ಯಾಯ,ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.