ನವದೆಹಲಿ: ಶ್ರೀಲಂಕಾ ಕೊಲಂಬೋದಲ್ಲಿ 8ನೇ ಬಾಂಬ್ ಸ್ಫೋಟವಾಗಿದೆ. ಇಲ್ಲಿಯವರೆಗೂ ಸುಮಾರು 8 ಕಡೆ ಬಾಂಬ್ ಸ್ಫೋಟ ಸಂಭವಿಸಿದ್ದು, 185ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಹಾಗಾಗಿ ಶ್ರೀಲಂಕಾ ಸರ್ಕಾರ ದೇಶಾದ್ಯಂತ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಸಂಜೆ 6 ರಿಂದ ನಾಳೆ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿದ್ದು, ಸದ್ಯ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇಂದು ಭಾನುವಾರ ಬೆಳಗ್ಗೆಯಿಂದಲೇ ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ಸರಣಿ ಬಾಂಬ್ ಸ್ಫೋಟ ನಡೆಯುತ್ತಿದೆ. ಈಸ್ಟರ್ ದಿನ ಪ್ರಾರ್ಥನೆ ನಡೆಯುತ್ತಿರುವಾಗ ಚರ್ಚ್‌ನಲ್ಲಿ ಮೊದಲು ಬಾಂಬ್ ಸ್ಫೋಟವಾಯಿತು. ಬಳಿಕ ಹೋಟೆಲ್‌ನಲ್ಲಿ ಸ್ಫೋಟ ಸಂಭವಿಸಿದೆ. ಇದರ ಪರಿಣಾಮ ಇಲ್ಲಿಯವರೆಗೂ 400ಕ್ಕೂ ಹೆಚ್ಚು ಅಧಿಕವಾಗಿ ಗಾಯಾಗೊಂಡಿದ್ದು, 185 ಮಂದಿ ದುರ್ಮಣ ಹೊಂದಿದ್ಧಾರೆ.
ಸರಣಿ ಬಾಂಬ್ ಸ್ಫೋಟದಿಂದಾಗಿ ಸಾವಿನ ಸಂಖ್ಯೆ ಸತತವಾಗಿ ಏರುತ್ತಲೇ ಇದೆ. ಇಲ್ಲಿ ನಡೆದ ಸರಣಿ ಬಾಂಬ್ ಸ್ಫೋಟವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸಹ ಖಂಡಿಸಿದ್ದಾರೆ. ಅಲ್ಲದೇ ನಮ್ಮ ದೇಶದಲ್ಲಿ ಇಂತಹ ಘಟನೆಗೆ ಯಾವುದೇ ಅವಕಾಶವಿಲ್ಲ ಎಂದು ಹೇಳಿದ್ಧಾರೆ.
ಈಸ್ಟರ್ ಪ್ರಾರ್ಥನೆಯಲ್ಲಿ ತೊಡಗಿದ್ದವರಿಗೆ ಇಂದು ಬೆಳಗ್ಗೆಯೇ ಆಘಾತ ಎದುರಾಗಿದೆ. ಇಲ್ಲಿನ ಚರ್ಚ್, ಹೋಟೆಲ್ ಗಳಲ್ಲಿ ಸರಣಿ ಬಾಂಬ್ ಸ್ಫೋಟವಾಗಿದ್ದು, ನೂರಾರು ಜನ ಸಾವನ್ನಪ್ಪಿದ್ದಾರೆ. ಈ ದಾಳಿಯ ಹಿಂದೆ ಉಗ್ರರ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮನಮುಟ್ಟಿದೆ.
Strongly condemn the horrific blasts in Sri Lanka. There is no place for such barbarism in our region. India stands in solidarity with the people of Sri Lanka. My thoughts are with the bereaved families and prayers with the injured.
— Narendra Modi (@narendramodi) April 21, 2019