ಉಡುಪಿ: ಆಗಸ್ಟ್ 1 ರಿಂದ 29 ರ ವರೆಗೆ ರವರೆಗೆ ಬೆಂಗಳೂರಿನ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಗೃಹರಕ್ಷಕರ ಅಧಿಕಾರಿಗಳ ತರಬೇತಿಯಲ್ಲಿ ಜಿಲ್ಲಾ ಗೃಹರಕ್ಷಕ ದಳದ ಕಾರ್ಕಳ ಘಟಕದ ಗೃಹರಕ್ಷಕ ಶ್ರೀಪ್ರಸಾದ್ ಬೆಳ್ಳಿ ಪದಕ ಪಡೆದಿರುತ್ತಾರೆ.
ಇವರನ್ನು ಜಿಲ್ಲಾ ಕಮಾಂಡೆಂಟ್ ಡಾ.ಪ್ರಶಾಂತ್ ಕುಮಾರ್ ಶೆಟ್ಟಿ ಗೃಹರಕ್ಷಕ ದಳ ಸಂಸ್ಥೆಯ ವತಿಯಿಂದ ಅಭಿನಂದಿಸಿರುತ್ತಾರೆ.