udupixpress
Home Trending ಲಾಕ್‍ ಡೌನ್ ಮುಗಿದ ನಂತರ ಎಸ್‍.ಎಸ್‍.ಎಲ್.ಸಿ ಪರೀಕ್ಷೆ ಬಗ್ಗೆ ನಿರ್ಧಾರ: ಸಚಿವ ಸುರೇಶ್ ಕುಮಾರ್

ಲಾಕ್‍ ಡೌನ್ ಮುಗಿದ ನಂತರ ಎಸ್‍.ಎಸ್‍.ಎಲ್.ಸಿ ಪರೀಕ್ಷೆ ಬಗ್ಗೆ ನಿರ್ಧಾರ: ಸಚಿವ ಸುರೇಶ್ ಕುಮಾರ್

ಚಾಮರಾಜನಗರ: ಕೊರೊನಾ ವೈರಸ್ ನಿಂದ ಲಾಕ್ ಡೌನ್ ಜಾರಿಯಾಗಿದ್ದು, ಲಾಕ್‍ ಡೌನ್ ಮುಗಿದ ನಂತರ ಎಸ್‍.ಎಸ್‍.ಎಲ್.ಸಿ ಪರೀಕ್ಷೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ನಗರದಲ್ಲಿ ಮಾತನಾಡಿದ ಸುರೇಶ್ ಕುಮಾರ್ ಅವರು, ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಬೇಕು, ಮಕ್ಕಳಿಗೆ ಎಷ್ಟು ಸಮಯ ಕೊಡಬೇಕು ಎಂಬುದನ್ನು ನಂತರ ತೀರ್ಮಾನ ಮಾಡುತ್ತೇವೆ. ಎಸ್ಸೆಸ್ಸೆಲ್ಸಿಗಿಂತ ದೊಡ್ಡ ಪರೀಕ್ಷೆ ಕೊರೊನಾ ವಿರುದ್ಧ ಹೋರಾಡುವುದು.

ಕೆಲವರು ಪರೀಕ್ಷೆ ಅನುಮಾನವೆಂದು ಗೊಂದಲ ಮೂಡಿಸುತ್ತಿದ್ದಾರೆ. ಪರೀಕ್ಷೆ ನಡೆಯುತ್ತದೆ. ಮಕ್ಕಳ ಮನಸ್ಸಿನಲ್ಲಿ ಪರೀಕ್ಷೆ ಬಗ್ಗೆ ಗೊಂದಲವಿಲ್ಲ. ಆದರೆ ಪೋಷಕರಲ್ಲಿ ಕೆಲವರಿಗೆ ಆತಂಕವಿದೆ. ಮೇ 3 ರ ನಂತರ ಒಂದು ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

error: Content is protected !!