ಮಲ್ಪೆ: ಮೀನುಗಾರಿಕಾ ಬಂದರಿನಲ್ಲಿ ಮುಂಜಾನೆ ಕೆಲಸಮಾಡಿ ಮಲ್ಪೆ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಸಿದ ಪುನೀತ್ ಸಾಧನೆ ಶ್ಲಾಘನೀಯ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಹೇಳಿದರು.
ಮೀನು ಮಾರಾಟ ಫೆಡರೇಷನ್ ಹಂಗಾರಕಟ್ಟೆ ಶಾಖೆಯ ಬ್ಯಾಂಕಿಂಗ್ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಪುನೀತ್ ನ ಮುಂದಿನ ವಿದ್ಯಾಭ್ಯಾಸಕ್ಕಾಗಿ ಫೆಡರೇಶನ್ ವತಿಯಿಂದ ರೂ. 25000 ಮೊತ್ತದ ಚೆಕ್ಕನ್ನು ನೀಡಿ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿ, ಗೀತಾನಂದ ಫೌಂಡೇಶನ್ ಪ್ರವರ್ತಕ ಶ್ರೀ ಆನಂದ ಸಿ ಕುಂದರ್, ರಾಜ್ಯದ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್,ಐರೋಡಿ ಗ್ರಾ.ಪಂ ಅಧ್ಯಕ್ಷೆ ಗೀತಾ ಶೆಟ್ಟಿ, ಯಾಂತ್ರೀಕೃತ ಮೀನುಗಾರ ಸಂಘ ಹಂಗಾರಕಟ್ಟೆ -ಕೋಡಿ ಬೇಂಗ್ರೆ ಅಧ್ಯಕ್ಷ ಬಿ.ಬಿ. ಕಾಂಚನ್, ಹಂಗಾರಕಟ್ಟೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅಧ್ಯಕ್ಷ ಬಿ.ಕೇಶವ ಕುಂದರ್, ಕೋಡಿಬೇಂಗ್ರೆ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಜಯ ಎಸ್ ಕುಂದರ್, ಕೋಡಿ ಬೇಂಗ್ರೆ ವಿಠ್ಠಲ ರುಖುಮಾಯಿ ದೇವಸ್ಥಾನದ ಅಧ್ಯಕ್ಷ ಚಂದ್ರ ಕುಂದರ್, ಕೋಡಿ ಬೇಂಗ್ರೆ ಶ್ರೀ ದುರ್ಗಾದೇವಿ ಮಹಾಕಾಳಿ ದೇವಸ್ಥಾನದ ಅಧ್ಯಕ್ಷ ಚಂದ್ರಶೇಖರ್ ನಾಯ್ಕ್, ಐರೋಡಿ ಬಾಳೆಕುದ್ರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಕೃಷ್ಣಪ್ಪ ಬೆನ್ನು ಮತ್ತಿತರರು ಉಪಸ್ಥಿತರಿದ್ದರು.