ಎಸ್.ಎಸ್.ಎಲ್.ಸಿ ಪರೀಕ್ಷೆ: 180 ಮಂದಿ ಗೈರು

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎಸ್‍ಎಸ್‍ಎಲ್‍ಸಿ ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಒಟ್ಟು 13584 ಮಂದಿ ಪರೀಕ್ಷೆ ಬರೆದಿದ್ದಾರೆ.  ಜಿಲ್ಲೆಯಲ್ಲಿ ಪರೀಕ್ಷೆಗೆ ಒಟ್ಟು 13,764 ಮಂದಿ ನೊಂದಾಯಿಸಿದ್ದು, ಇದರಲ್ಲಿ 180 ಮಂದಿ ಗೈರು ಹಾಜರಾಗಿದ್ದಾರೆ.

ಪರೀಕ್ಷೆಗೆ ನೊಂದಾಯಿಸಿದ ರೆಗ್ಯುಲರ್ ಮತ್ತು ರೆಗ್ಯುಲರ್ ಪುನರಾವರ್ತಿತ 13317 ಮಂದಿ ವಿದ್ಯಾರ್ಥಿಗಳಲ್ಲಿ 126 ಮಂದಿ ಗೈರು ಹಾಜರಾಗಿದ್ದು, 13191 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. 447 ಮಂದಿ ಖಾಸಗಿಯಾಗಿ ಪರೀಕ್ಷೆಗೆ ನೊಂದಾಯಿಸಿದ್ದ ಅಭ್ಯರ್ಥಿಗಳಲ್ಲಿ 54 ಮಂದಿ ಗೈರು ಹಾಜರಾಗಿದ್ದು, 393 ಮಂದಿ ಪರೀಕ್ಷೆ ಬರೆದಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣಾ ಇಲಾಖೆಯ ಉಪ ನಿರ್ದೇಶಕರು ( ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.