ಬೆಂಗಳೂರು: ಮೇ-19 ರಂದು ಮಧ್ಯಾಹ್ನ 12.30ಕ್ಕೆ ಹತ್ತನೆ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಈ ಬಗ್ಗೆ ಬುಧವಾರ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ‘ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ ಮತ್ತು ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ. https://karresults.nic.in ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು’.
ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ.
ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯ.https://t.co/qP2v5VxzQI
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.
ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ.#sslcresults— B.C Nagesh (@BCNagesh_bjp) May 18, 2022
‘ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ SMS ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ. ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭವಾಗಲಿ’ ಎಂದು ಶಿಕ್ಷಣ ಸಚಿವರು ಹಾರೈಸಿದ್ದಾರೆ.












