ಉಡುಪಿ, ಮೇ 21: 2018 -19 ನೇ ಸಾಲಿಗೆ ಎಸ್ಎಸ್ಎಲ್ಸಿಯಲ್ಲಿ ಪ್ರಥಮ ಬಾರಿಗೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ.
SC ವಿದ್ಯಾರ್ಥಿಗಳು ದಾಖಲೆಗಳೊಂದಿಗೆ www.sw.kar.nic.in SSLC prize money, ಹಾಗೂ ST ವಿದ್ಯಾರ್ಥಿಗಳು www.tw.kar.nic.in SSLC prize money ಸ್ಕೀಮ್ನಲ್ಲಿ ಸಂಪೂರ್ಣ ಮಾಹಿತಿಯನ್ನು (ಎಸ್ಎಸ್ಎಲ್ಸಿ ಅಂಕ ಪಟ್ಟಿ, ಆಧಾರ್ಕಾರ್ಡ್, ಬ್ಯಾಂಕ್ ಖಾತೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ) ನೀಡಿ ಕಡ್ಡಾಯವಾಗಿ ಆನ್ ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಿದೆ.
ಹೆಚ್ಚಿನ ಮಾಹಿತಿಗೆ ದೂ.ಸಂ: 0820-2528884 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.