ಎಸೆಸೆಲ್ಸಿ ತುಳು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸಂಖ್ಯೆ ಗಣನೀಯ ವೃದ್ಧಿ

ಮಂಗಳೂರು: ತುಳುವನ್ನು ತೃತೀಯ ಭಾಷೆಯಾಗಿ ಆಯ್ದುಕೊಂಡು ಎಸೆಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಗಣನೀಯ ವೃದ್ಧಿಯಾಗಿದೆ. 2018-19ನೇ ಸಾಲಿನಲ್ಲಿ ಒಟ್ಟು 34 ಶಾಲೆಗಳಿಂದ 660 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಕಳೆದ ಸಾಲಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ 417 ಆಗಿತ್ತು.