ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಇಂದು 6 ಮಂದಿ ಕೊರೊನಾ ಮಹಾಮಾರಿಗೆ ಮೃತಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 170ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ ಮಾಹಿತಿ ನೀಡಿದೆ.
ಬೆಂಗಳೂರು ಗ್ರಾಮಾಂತರದಲ್ಲಿ 3, ಮೈಸೂರು, ದಕ್ಷಿಣ ಕನ್ನಡ, ಕಲಬುರಗಿಯಲ್ಲಿ ತಲಾ ಒಂದು ಸಾವಿನ ಪ್ರಕರಣ ವರದಿಯಾಗಿದೆ.
ಉಳಿದಂತೆ ರಾಜ್ಯದಲ್ಲಿ 160 ಮಂದಿ
ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ನಗರದಲ್ಲೇ ಬರೋಬ್ಬರಿ 112 ಮಂದಿ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.