ಉಡುಪಿ: ಬಿಜೆಪಿ ನೇತೃತ್ವದ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನೀಲ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಚಿವರನ್ನು ಸ್ವಾಗತಿಸಿ ಶಾಲು ಹೊದೆಸಿ ಪುಸ್ತಕ ನೀಡಿ ಗೌರವಿಸಿದರು. ಸಚಿವರು ಜಿಲ್ಲಾ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು.
ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ದೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಹಾಗೂ ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.