ಜನಾಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ: ಮಾಸ್ಕ್ ದಂಡ ಸಾವಿರದಿಂದ 250ಕ್ಕೆ ಇಳಿಕೆ

ಬೆಂಗಳೂರು: ಕೊರೊನಾ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಕೈಗೊಂಡಿತ್ತು.

ಅದರಂತೆ ಮಾಸ್ಕ್ ಧರಿಸಿದೆ ಓಡಾಡುತ್ತಿದ್ದವರಿಗೆ ನಗರ ಪ್ರದೇಶದಲ್ಲಿ 1 ಸಾವಿರ ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲು ಸರ್ಕಾರ ಕ್ರಮಕೈಗೊಂಡಿತ್ತು. ಆದರೆ ಸರ್ಕಾರದ ಈ ಕ್ರಮ ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ.

ಸರ್ಕಾರದ ಈ ಕ್ರಮಕ್ಕೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಸರ್ಕಾರ ತನ್ನ ದಂಡದ ಪ್ರಮಾಣವನ್ನು ಇಳಿಕೆ ಮಾಡಿ ಆದೇಶ ಹೊರಡಿಸಿದೆ.

ಸಾವಿರದಿಂದ 250ಕ್ಕೆ ದಂಡ ಇಳಿಕೆ:
ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರವು ಮಾಸ್ಕ್ ದಂಡದ ಪ್ರಮಾಣವನ್ನು ನಗರ ಪ್ರದೇಶದಲ್ಲಿ 1 ಸಾವಿರದಿಂದ 250 ರೂ. ಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ.ಯಿಂದ 100 ರೂ.ಗೆ ಇಳಿಕೆ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.