ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಬೊಮ್ಮಾಯಿ ಸೋಮವಾರ ಆಕ್ಮೆ(ACME) ಕ್ಲೀನ್ಟೆಕ್ ಸೊಲುಷನ್ ಪ್ರೈವೇಟ್ ಲಿಮಿಟೆಡ್ ಗ್ರೂಪ್ ಜೊತೆ ಮಂಗಳೂರಿನಲ್ಲಿ 52000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಕಂಪೆನಿಯು ಮಂಗಳೂರಿನಲ್ಲಿ ಗ್ರೀನ್ ಹೈಡ್ರೋಜನ್, ಅಮೋನಿಯಾ ಘಟಕ ಸ್ಥಾಪನೆ ಹಾಗೂ ಪೂರಕವಾಗಿ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆಗೆ ಕರ್ನಾಟಕ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದೆ.
ಇಂಧನ ಸಚಿವ ಸುನಿಲ್ ಕುಮಾರ್, ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಇಲಾಖೆಯ ಆಯುಕ್ತ ಗುಂಜನ್ ಕೃಷ್ಣ, ಆಕ್ಮೆ ಗ್ರೂಪ್ ನ ಉಪಾಧ್ಯಕ್ಷ ಶಶಿ ಶೇಖರ್, ಕಂಪೆನಿಯ ಅಧಿಕಾರಿಗಳಾದ ಎಂ ವಿ ವಿ ಎಸ್ ರೆಡ್ಡಿ, ಅರುಣ್ ಚೋಪ್ರಾ ಉಪಸ್ಥಿತರಿದ್ದರು.