ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಆಯೋಜಿಸಿದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪೆರ್ಡೂರಿನ ಕುಂಬಾರರ ಗುಡಿಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯ ಮಟ್ಟದ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದ್ದು ಸಂಸ್ಥೆಯ ಅಧ್ಯಕ್ಷರಾದ ಸಂತೋಷ್ ಕುಲಾಲ್ ಪಕ್ಕಾಲು ಅವರಿಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರು ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಸಭಾಧ್ಯಕ್ಷ ಯು. ಟಿ. ಖಾದರ್, ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು ಇದರ ಅಧ್ಯಕ್ಷ ಜಿ.ಟಿ. ದೇವೇಗೌಡ, ಶಾಸಕ ಯಶಪಾಲ್ ಸುವರ್ಣ, ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿ’ಸೋಜಾ, ಸಂಘದ ಉಪಾಧ್ಯಕ್ಷ ಶಂಕರ್ ಕುಲಾಲ್ ಪೆರಂಪಳ್ಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕುಲಾಲ್ ಪಟ್ಟ ನಿರ್ದೇಶಕರಾದ ಸಂದೀಪ್ ಬಂಗೇರ, ಉದಯ್ ಕುಲಾಲ್, ಗೌರವ ಸಲಹೆಗಾರ ರಾಮ ಕುಲಾಲ್ ಪಕ್ಕಾಲು ಮೊದಲಾದವರು ಉಪಸ್ಥಿತರಿದ್ದರು.

















