ಉಡುಪಿ: ಅಂತರಾಷ್ಟ್ರೀಯ ವಿಕೋಪ ಅಪಾಯ ತಗ್ಗಿಸುವಿಕೆ ದಿನಾಚರಣೆ ಅಂಗವಾಗಿ ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರವು ವಿಕೋಪ ನಿರ್ವಹಣೆಯಲ್ಲಿ ತಂತ್ರಜ್ಞಾನದ ಬಳಕೆ ಮತ್ತು ಉಪಯೋಗಗಳು” ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದೆ.
18 ವರ್ಷ ಮೇಲ್ಪಟ್ಟ ಆಸಕ್ತ ಅಭ್ಯರ್ಥಿಗಳು ತಮ್ಮ ಪ್ರಬಂದಗಳನ್ನು ಕನ್ನಡ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ ನವಂಬರ್ 15 ರೊಳಗೆ ಕಳುಹಿಸಿಕೊಡಬಹುದಾಗಿದೆ. ಪ್ರಬಂಧವನ್ನು ಟೈಪ್ ಮಾಡಿ ಇ-ಮೈಲ್ ಮೂಲಕ ವರ್ಡ್ ಫೈಲ್ ಡಾಕ್ಯುಮೆಂಟ್ ಮಾಡಿ [email protected] ಗೆ ಅಥವಾ ಕೈಬರಹದ ಪ್ರಬಂದಗಳನ್ನು ಮಾನ್ಯ ಮಹಾ ನಿರ್ದೇಶಕರು, ಆಡಳಿತ ತರಬೇತಿ ಸಂಸ್ಥೆ, ಲಲಿತ ಮಹಲ್ ರಸ್ತೆ ಮೈಸೂರು-570011 ಕ್ಕೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ https://atimysore.gov.in/ ಅಥವಾ ಮೊ.ನಂ: 97407 68931/ 99012 12215 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.