ರಾಜ್ಯ ಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ – 2023 ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟನೆ – ಶಾಸಕ ರಘುಪತಿ ಭಟ್ ಭಾಗಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು, ಜಿಲ್ಲಾಡಳಿತ, ಉಡುಪಿ ಜಿಲ್ಲೆ ವತಿಯಿಂದ ರಾಜ್ಯ ಮಟ್ಟದ “ಸಮಗ್ರ ಯಕ್ಷಗಾನ ಸಮ್ಮೇಳನ – 2023” ಫೆಬ್ರವರಿ 11 ಮತ್ತು 12 ರಂದು ಎಂ.ಜಿ.ಎಂ ಮೈದಾನದಲ್ಲಿ ನಡೆಯುತ್ತಿದ್ದು, ಇದರ ಉದ್ಘಾಟನೆಯನ್ನು ಇಂದು ದಿನಾಂಕ 11-02-2023 ರಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ಉದ್ಘಾಟಿಸಿದರು. ಶಾಸಕರು, ಸಮಗ್ರ ಯಕ್ಷಗಾನ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಎಚ್. ಎಸ್ ಬಲ್ಲಾಳ್, ಗುರ್ಮೆ ಫೌಂಡೇಶನ್ ನ ಗುರ್ಮೆ ಸುರೇಶ್ ಶೆಟ್ಟಿ, ಉದ್ಯಮಿಗಳಾದ ಪುರುಶೋತ್ತಮ್ ಶೆಟ್ಟಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸುರೇಂದ್ರ ಅಡಿಗ ನೀಲಾವರ, ಸಮಗ್ರ ಯಕ್ಷಗಾನ ಸಮ್ಮೇಳನದ ಅಧ್ಯಕ್ಷರಾದ ಡಾll. ಎಂ. ಪ್ರಭಾಕರ್ ಜೋಶಿ, ಕಾರ್ಯಾಧ್ಯಕ್ಷರಾದ ಜಿ.ಎಲ್ ಹೆಗ್ಡೆ, ಪ್ರಧಾನ ಸಂಚಾಲಕರಾದ ಮುರಳಿ ಕಡೆಕಾರ್, ಪಿ. ಕಿಶನ್ ಹೆಗ್ಡೆ, ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಎಂ.ಎಲ್ ಸಾಮಗ ಮತ್ತು ಉಡುಪಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.