ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಉತ್ತಮ ಆಡಳಿತ ಮಾಸ (ಗುಡ್ ಗವರ್ನೆನ್ಸ್ ಮಂಥ್) 2022 ರ ಅಂಗವಾಗಿ ಡಿಸೆಂಬರ್ ಮಾಹೆಯಲ್ಲಿ ವಿಶೇಷ ಆನ್ಲೈನ್ ಉಪನ್ಯಾಸ, ತಜ್ಞ ಸಮಿತಿ ಚರ್ಚೆ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ.
ಉತ್ತಮ ಆಡಳಿತಕ್ಕಾಗಿ ತಂತ್ರಜ್ಞಾನ ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಏರ್ಪಡಿಸಲಾಗಿದ್ದು, ಡಿಸೆಂಬರ್ 15 ರ ಒಳಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು 500 ಪದಗಳಿಗೆ ಮೀರದಂತೆ ಇ-ಮೇಲ್ [email protected] ಗೆ ಪ್ರಬಂಧ ಬರೆದು ಕಳುಹಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.