ಉಡುಪಿ: ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು
ಜೀವನೋಪಾಯ ಇಲಾಖೆಯ ವತಿಯಿಂದ ವಿಶ್ವ ಯುವ ಕೌಶಲ್ಯ ದಿನಾಚರಣೆ ಪ್ರಯುಕ್ತ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಆಯೋಜಿಸಲಾಗಿರುತ್ತದೆ.
ಪದವಿ ಪೂರ್ವ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿಷಯ: ಕೈಗಾರಿಕಾ ಶೈಕ್ಷಣಿಕ ಒಗ್ಗೂಡುವಿಕೆಯಿಂದ ಕೌಶಲ್ಯದ ಅಂತರವನ್ನು ಕಡಿಮೆ ಮಾಡುವುದು, ಶಕ್ತಿಯುತ ಹಾಗೂ ಸುಸ್ಥಿರ ಬೆಳವಣಿಗೆಗಾಗಿ ಕೌಶಲ್ಯಯುತ ಮಾನವ ಸಂಪನ್ಮೂಲವನ್ನು ಸೃಷ್ಟಿಸುವ ಮಾರ್ಗಗಳು, ಕೌಶಲ್ಯ ಮತ್ತು ಸಾಮರ್ಥ್ಯಗಳ ಮೇಲೆ ಕೇಂದ್ರೀಕೃತವಾದ ಉನ್ನತ ಶಿಕ್ಷಣದ ಬಗ್ಗೆ ಮರುಚಿಂತನೆ.
8 ರಿಂದ 12ನೇ ತರಗತಿ ಹಾಗೂ ಐ.ಟಿ.ಐ ವಿದ್ಯಾರ್ಥಿಗಳಿಗೆ ವಿಷಯ: ಯುವಕರಲ್ಲಿ ಕೌಶಲ್ಯಾಭಿವೃದ್ಧಿಯ ಪ್ರಾಮುಖ್ಯತೆ, ಶಿಕ್ಷಣದಲ್ಲಿ ಕೌಶಲ್ಯಾಭಿವೃದ್ಧಿಯ ಪ್ರಾಮುಖ್ಯತೆ.
ಪ್ರಬಂಧವನ್ನು ಸಿದ್ಧಪಡಿಸಿ ಜುಲೈ 10 ರ ಒಳಗೆ https://www.kaushalkar.com/app/skill-essay-compitition ಲಿಂಕ್ ಬಳಸಿ ನೋಂದಣಿ ಮಾಡಿ, ಪ್ರಬಂಧವನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9448409355, 9739691294, 9449943882 ಅಥವಾ ಇಮೇಲ್ [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.