ಉಡುಪಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ನಗರ ಬಿಜೆಪಿ ನಗರ ಯುವ ಮೋರ್ಚಾ ಮತ್ತು ವಾಲಿಬಾಲ್ ಫ್ರೆಂಡ್ಸ್ ಹನುಮಂತನಗರ ನಿಟ್ಟೂರು ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಕೂಟ “ಅಟಲ್ ಟ್ರೋಫಿ 2021” ಆಯೋಜಿಸಲಾಯಿತು.
ಪಂದ್ಯಕೂಟಕ್ಕೆ ಚಾಲನೆ ನೀಡಿ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರದ ಅವಧಿಯಲ್ಲಿ ಭಾರತವು ಅಣ್ವಸ್ತ್ರ ಶಕ್ತಿಯಾಗಿ ಪ್ರಪ್ರಥಮ ಬಾರಿಗೆ ವಿಶ್ವದ ಗಮನ ಸೆಳೆದಿತ್ತು. ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ದೇಶದ ಸಶಕ್ತೀಕರಣಕ್ಕೆ ಚಾಲನೆ ನೀಡಲಾಗಿತ್ತು ಎಂದರು.
ಶಾಸಕ ಕೆ. ರಘುಪತಿ ಭಟ್ ಹಾಗೂ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಸಂಯೋಜನೆಯಲ್ಲಿ ಪಂದ್ಯಕೂಟವನ್ನು ಆಯೋಜಿಸಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಇಂಧನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರ ಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಡಾ. ಸಂದೀಪ್, ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ, ಕಾರ್ಯದರ್ಶಿ ಶ್ವೇತಾ ಪೂಜಾರಿ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‍ಪಾಲ್ ಎ. ಸುವರ್ಣ, ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ.
ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ನಗರ ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ, ವಾಲಿಬಾಲ್ ಫ್ರೆಂಡ್ಸ್ ಹನುಮಂತನಗರ ನಿಟ್ಟೂರು ಅಧ್ಯಕ್ಷ ದಿನೇಶ್ ಕುಂದರ್, ನಗರಸಭಾ ಸದಸ್ಯ ಸಂತೋಷ್ ಜತ್ತನ್, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ ಸುವರ್ಣ, ಕಾರ್ಯಕ್ರಮ ಸಂಚಾಲಕ ಸುವರ್ಧನ್ ನಾಯಕ್ ಉಪಸ್ಥಿತರಿದ್ದರು.