ಬೆಂಗಳೂರು: ಫೆ. 26-27 ರಂದು ರಾಜ್ಯಮಟ್ಟದ ಉದ್ಯೋಗ ಮೇಳ

ಬೆಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಇದರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ನೀಡುವ ಸಲುವಾಗಿ ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬೃಹತ್ ಉದ್ಯೋಗ ಮೇಳ-2024 ವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ.

ಎಲ್ಲಾ ರೀತಿಯ ವಿದ್ಯಾರ್ಹತೆಯುಳ್ಳ ಉದ್ಯೋಗಾಕಾಂಕ್ಷಿಗಳು https://skillconnect.kaushalkar.com/
ಲಿಂಕ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.