ನಾಳೆಯಿಂದ ಎಸೆಸ್ಸೆಲ್ಸಿ ಎಕ್ಸಾಂಗೆ ರಾಜ್ಯ ರೆಡಿ: ಪರೀಕ್ಷೆ ಬರೆಯಲಿದ್ದಾರೆ 8,48,203 ವಿದ್ಯಾರ್ಥಿಗಳು

ಬೆಂಗಳೂರು: ಲಾಕ್‌ ಡೌನ್‌ ನಿಂದ ಮುಂದೂಡಲಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಜೂ.25 ರಿಂದ ಆರಂಭವಾಗಲಿದ್ದು, ಪರೀಕ್ಷಾ ಕೊಠಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಭರದಿಂದ ಸಾಗಿದೆ.
ರಾಜ್ಯದಲ್ಲಿ 3,209 ಪರೀಕ್ಷಾ ಕೇಂದ್ರಗಳಲ್ಲಿ 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸುಮಾರು 1 ಲಕ್ಷ ಮಂದಿ ವಿವಿಧ ಹಂತಗಳಲ್ಲಿ ಪರೀಕ್ಷಾ ಮೇಲ್ವಿಚಾರಣೆ ಹಾಗೂ ವ್ಯವಸ್ಥೆಗೆ ಸಹಕರಿಸಲಿದ್ದಾರೆ.‌
ಸೋಂಕು ಹರಡುವುದನ್ನು ತಡೆಗಟ್ಟಲು ಪೋಷಕರಿಗೆ ಮನವರಿಕೆ:
ಪೋಷಕರಿಗೆ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಬಗ್ಗೆ 9 ಲಕ್ಷ ಕರಪತ್ರಗಳನ್ನು ವಿತರಿಸಿ, ಅವರು ಪಾಲಿಸಬೇಕಾದ ನಿಯಮಗಳ ಬಗ್ಗೆ ಮನವರಿಕೆ ಮಾಡಲಾಗಿದೆ.
7,115 ಥರ್ಮಲ್‌ ಸ್ಕ್ಯಾನರ್‌ಗಳನ್ನು ಒದಗಿಸಲಾಗಿದ್ದು, 5,755 ಆರೋಗ್ಯ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ.ಸುಮಂಗಲಾ ಅವರು ತಿಳಿಸಿದ್ದಾರೆ.
ಜೂ.೧೮ಕ್ಕೆ ನಡೆದ ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆಯಲ್ಲಿ ಆಗಿರುವ ಕೆಲವೊಂದು ಅವಸ್ಥೆಯನ್ನು ಗಮನ ಹರಿಸಿ, ನಾಳೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅದಕ್ಕೆ ಅವಕಾಶ ನೀಡದಂತೆ ನೋಡಿಕೊಳ್ಳಲು ಗಮನ ಹರಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಕನಿಷ್ಠ ಇಬ್ಬರು ದೈಹಿಕ ಶಿಕ್ಷಣ ಶಿಕ್ಷಕರು ವಿದ್ಯಾರ್ಥಿಗಳ ನಡುವೆ ಅಂತರ ಇರುವಂತೆ ನೋಡಿಕೊಳ್ಳುಲಾಗುವುದು. ಹಾಗೂ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು  ವಹಿಸಲಿದ್ದಾರೆ.