ಕಾರ್ಕಳ ತಾಲೂಕಿನ ಅನಧೀಕೃತ ಕಟ್ಟಡಗಳನ್ನು ಶೀಘ್ರ ತೆರವುಗೊಳಿಸಿ:ಕ್ಸೇವಿಯರ್ ಡಿಮೆಲ್ಲೋ

ಕಾರ್ಕಳ: ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಯಿಂದ 40 ಮೀಟರ್ ಅಂತರದಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ ಹೊರಡಿಸಲಾಗಿದ್ದು.

ಅದರಂತೆ, ಸರ್ಕಾರದ ಸುತ್ತೋಲೆಯನ್ನು ಹೈಕೋರ್ಟ್ ಎತ್ತಿಹಿಡಿದದ್ದು ಸ್ವಾಗತಾರ್ಹ ನಡೆ ,ಕಾರ್ಕಳ ತಾಲೂಕಿನ ಅನೇಕ ಕಡೆಗಳಲ್ಲಿ 40 ಮೀ ಅಂತರದಲ್ಲಿ ಅನಧೀಕೃತ ಕಟ್ಟಡಗಳು ನಿರ್ಮಾಣವಾಗಿದ್ದು  ಇಂತಹ ಕಟ್ಟಡಗಳನ್ನು ತೆರವುಗೊಳಿಸದಿದ್ದಲ್ಲಿ ತಹಶೀಲ್ದಾರ್, ಕಂದಾಯ ಇಲಾಖೆ,ಮುಡಾ,ಪಿಡಬ್ಲ್ಯೂ ಡಿ ವಿರುದ್ದ ನ್ಯಾಯಾಲಯಕ್ಕೆ ದಾವೆ ಹೂಡಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತ ತಾ.ಪಂ.ಸದಸ್ಯರಾದ ಕ್ಸೇವಿಯರ್ ಡಿಮೆಲ್ಲೋ ತಿಳಿಸಿದ್ದಾರೆ.

ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಯ 40 ಮೀಟರ್ ಒಳಗೆ ಯಾವುದೇ ಕಟ್ಟಡ ನಿರ್ಮಿಸುವಂತಿಲ್ಲ. ಅಂದರೆ, ಹೆದ್ದಾರಿಯ ಮಧ್ಯಭಾಗದಿಂದ 40 ಮೀಟರ್ ಅಂತರದಲ್ಲಿ ಕಟ್ಟಡ ನಿರ್ಮಾಣ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ.

ಉಡುಪಿ ಜಿಲ್ಲೆಯ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಟ್ಟಡ ನಿರ್ಮಾಣ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿತ್ತು. ಬಳಿಕ, 60 ದಿನಗಳಲ್ಲಿ ಅತಿಕ್ರಮಿತ ಕಟ್ಟಡ ತೆರವಿಗೆ ಆದೇಶ ಹೊರಡಿಸಲಾಗಿತ್ತು. 4 ಪ್ರತಿವಾದಿಗಳ ಅತಿಕ್ರಮಿತ ಕಟ್ಟಡ ತೆರವಿಗೆ ಹೈಕೋರ್ಟ್ ಆದೇಶ ನೀಡಿತ್ತು. ಕಟ್ಟಡ‌ ನಿರ್ಮಾಣಕ್ಕೆ ಅನುಮತಿ ನೀಡಿದ ಬಗ್ಗೆಯೂ ವಿಚಾರಣೆ ನಡೆಸಲಾಗಿತ್ತು. 15 ದಿನಗಳಲ್ಲಿ ಸತ್ಯ ಶೋಧನೆ ನಡೆಸಿ ಕ್ರಮ ಕೈಗೊಳ್ಳಲು ಸೂಚನೆ ಕೊಡಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದ್ದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಬಿಲ್ಡಿಂಗ್ ಲೈನ್ ಕಾಯ್ದುಕೊಳ್ಳಲು ಹೈಕೋರ್ಟ್ ಸೂಚನೆ ಕೊಟ್ಟಿದೆ. ಇದು ಅತ್ಯಂತ ಒಳ್ಳೆಯ ಬೆಳವಣಿಗೆ ಎಂದು ಡಿಮೆಲ್ಲೋ ತಿಳಿಸಿದ್ದಾರೆ.

ಕಾರ್ಕಳ ತಾಲೂಕಿನ ಅನೇಕ ಕಡೆಗಳಲ್ಲಿ 40 ಮೀ ಅಂತರದಲ್ಲಿ ಅನಧೀಕೃತ ಕಟ್ಟಡಗಳು ನಿರ್ಮಾಣವಾಗಿದ್ದು  ಇಂತಹ ಕಟ್ಟಡಗಳನ್ನು ತೆರವುಗೊಳಿಸದಿದ್ದಲ್ಲಿ ತಹಶೀಲ್ದಾರ್, ಕಂದಾಯ ಇಲಾಖೆ ವಿರುದ್ದ ನ್ಯಾಯಾಲಯಕ್ಕೆ ದಾವೆ ಹೂಡಲಾಗುವುದು ಎಂದವರು ಎಚ್ಚರಿಸಿದ್ದಾರೆ.