ರಾಜ್ಯಾದ್ಯಂತ 144 ಸೆಕ್ಷನ್: ಶಾಲಾ-ಕಾಲೇಜು, ಬಾರ್-ಪಬ್ ಬಂದ್.?

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ವೇಗವಾಗಿ ಹರಡುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ವರದಿಯೊಂದನ್ನು ನೀಡಿದೆ.

ಈ ವರದಿಯಲ್ಲಿ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದ ಏಳು ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ ವರೆಗೆ ಕಠಿಣ ನೈಟ್ ಕರ್ಫ್ಯೂ ಮಾಡುವಂತೆ ಸಲಹೆ ನೀಡಲಾಗಿದೆ.
ಅಲ್ಲದೆ, ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಬೇಕು, ಜನ ಜಂಗುಳಿ ಸೇರುವ ಕಾರ್ಯಕ್ರಮಗಳು ಬಂದ್ ಮಾಡಬೇಕು, ಶಾಲಾ – ಕಾಲೇಜು ಹಾಗೂ ಚಿತ್ರಮಂದಿರ ಬಂದ್ ಮಾಡಬೇಕು ಎಂದು ಶಿಫಾರಸ್ಸು ಮಾಡಲಾಗಿದೆ ಎಂದು ಹೇಳಲಾಗಿದೆ.

ಬೆಂಗಳೂರು ಲಾಕ್:
ಬೆಂಗಳೂರಿನಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಘೋಷಿಸುವಂತೆ ಸಲಹೆ ನೀಡಲಾಗಿದೆ. ಬೆಂಗಳೂರಲ್ಲಿನ ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ ವಿಧಿಸಬೇಕು ಸೋಂಕು ಹೆಚ್ಚಿರುವ ಇತರ ಜಿಲ್ಲೆಗಳಲ್ಲೂ ಕಠಿಣ ಕ್ರಮ ಜಾರಿ ಮಾಡಬೇಕು. ಬಾರ್- ಪಬ್ ಬಂದ್ ಮಾಡಬೇಕು ಎಂದು ಎಂದು ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ ಎಂದು ತಿಳಿದುಬಂದಿದೆ.