ಕಾರ್ಕಳ: ಶಾಲಾ ಪ್ರವಾಸಕ್ಕಾಗಿ ಉಡುಪಿಗೆ ಬರುತ್ತಿದ್ದ ಟೆಂಪೋ ಟ್ರಾವೆಲರ್ ಒಂದು ಉರುಳಿ ಬಿದ್ದು ಶಾಲಾ ಬಾಲಕನೋರ್ವ ಸ್ಥಳದಲ್ಲೇ ಅಸುನೀಗಿದ ಘಟನೆ ಕುದುರೆಮುಖ-ಮಾಳ ರಾಷ್ಟ್ರೀಯ ಹೆದ್ದಾರಿ ಎಸ್ ಕೆ ಬಾರ್ಡರ್ ಬಳಿ ಮೇ.8 ರಂದು ಸಂಜೆ ನಡೆದಿದೆ.
ಮೃತ ಬಾಲಕನನ್ನು ಧಾರವಾಡ ಮೂಲದ ಹೇಮಂತ್ ಎಂದು ಗುರುತಿಸಲಾಗಿದೆ. ಶಾಲಾ ಪ್ರವಾಸದ ಟೆಂಪೋ ಟ್ರಾವೆಲರ್ ಉಡುಪಿ ಕಡೆ ಬರುತ್ತಿದ್ದು, ಕುದುರೆಮುಖ ಘಾಟಿ ತಲುಪುತ್ತಿದ್ದಂತೆ ಚಾಲಕ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ. ಇದರ ಪರಿಣಾಮ ಹಲವಾರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಕಾರ್ಕಳದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕನ ಮೃತ ದೇಹವನ್ನು ಕಾರ್ಕಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.