ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮೃತ್ಯು

ಬೆಳ್ತಂಗಡಿ: ಕಳೆದ ಆರು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ದೇವಗಿರಿ ನಿವಾಸಿ ಬಿಜು ಎಂಬವರ ಪುತ್ರಿ ರಿನ್ಸಿ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಗುರುದೇವ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.