ಜ್ಞಾನ ಸುಧಾ ಕಾಲೇಜಿನ ವಿದ್ಯಾರ್ಥಿನಿ ಚೆಸ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಜ್ಞಾನಸುಧಾ ಪ.ಪೂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕು. ಅರುಂದತಿ.ಜಿ.ವಿ ಇವರು ಶ್ರೀ ಮೂಕಾಂಬಿಕ ದೇವಳ ಸ್ವತಂತ್ರ ಪ.ಪೂ. ಕಾಲೇಜು ಕೊಲ್ಲೂರಿನಲ್ಲಿ ನಡೆದ ಪದವಿ ಪೂರ್ವ ವಿಭಾಗದ ಉಡುಪಿ ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾಟದಲ್ಲಿ 5ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಶ್ರೀ ಗಣೇಶ್‌ ವಿ.ಜಿ ಮತ್ತು ಶ್ರೀಮತಿ ವೀಣಾ ದಂಪತಿಗಳ ಪುತ್ರಿ. ರಾಜ್ಯಮಟ್ಟಕ್ಕೆ ಆಯ್ಕೆಗೊಂಡ ವಿದ್ಯಾರ್ಥಿನಿಗೆ ಜ್ಞಾನಸುಧಾ ಪರಿವಾರ ಶುಭಕೋರಿದೆ.