ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ: ನಾಲ್ವರು ಶಂಕಿತ ಆರೋಪಿಗಳನ್ನು ತಮಿಳುನಾಡಿನಲ್ಲಿ ವಶಕ್ಕೆ ಪಡೆದ ಪೊಲೀಸರು

ಮೈಸೂರು: ಮೈಸೂರಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ನಾಲ್ವರು ಶಂಕಿತರನ್ನು ಪೊಲೀಸರ ವಿಶೇಷ ತಂಡ ವಶಕ್ಕೆ ಪಡೆದಿದೆ. ತಮಿಳುನಾಡಿಗೆ ತೆರಳಿದ್ದ ಪೊಲೀಸ್ ವಿಶೇಷ ಟೀಂ ನಾಲ್ವರನ್ನ ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ.

ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ರಾಜ್ಯದಾದ್ಯಂತ ಒತ್ತಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಪೊಲೀಸರು ವಿಶೇಷ ಟೀಂಗಳಾಗಿ ಕೇರಳ ಮತ್ತು ತಮಿಳುನಾಡಿಗೆ ತೆರಳಿದ್ದರು ಎನ್ನಲಾಗಿತ್ತು.

ಇದೀಗ ತಮಿಳುನಾಡಿಗೆ ತೆರಳಿದ್ದ ಪೊಲೀಸರ ವಿಶೇಷ ಟೀಂ ನಾಲ್ವರನ್ನು ವಶಕ್ಕೆ ಪಡೆದಿದೆ ಎನ್ನಲಾಗಿದೆ. ಯಾವುದೇ ಸಮಯದಲ್ಲಿ ಪೊಲೀಸರು ಶಂಕಿತರನ್ನು ರಾಜ್ಯಕ್ಕೆ ಕರೆತರುವ ಸಾಧ್ಯತೆಗಳಿವೆ. ಶಂಕಿತ ನಾಲ್ವರೂ ಸಹ ವಿದ್ಯಾರ್ಥಿಗಳು ಎನ್ನಲಾಗಿದೆ. ಸದ್ಯ ಅಜ್ಞಾತ ಸ್ಥಳದಲ್ಲಿ ನಾಲ್ವರ ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.