ವಿದ್ಯಾರ್ಥಿ ಪಾಸುಗಳ ಮಾನ್ಯತಾ ಅವಧಿ ಜೂ. 30 ರವರೆಗೆ ವಿಸ್ತರಣೆ

ಉಡುಪಿ, ಜೂನ್ 11: 2019-20 ನೇ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಪ್ರಾರಂಭವಾಗಿರುವುದರಿಂದ, ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ, ಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳು, 2018-19 ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿ ಪಾಸುಗಳನ್ನು ತೋರಿಸಿ, ಜೂನ್ 30 ರವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು 2018-19 ನೇ ಸಾಲಿನ ವಿದ್ಯಾರ್ಥಿ ಪಾಸಿನ ಜೊತೆಗೆ ಪ್ರಸಕ್ತ ಸಾಲಿನ ಭೋಧನಾ ಶುಲ್ಕ ರಸೀದಿ ಅಥವಾ ಶಾಲಾ/ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿರುತ್ತದೆ.

ಶಾಲಾ ಹಾಗೂ ಪಿಯುಸಿ ವಿದ್ಯಾರ್ಥಿಗಳು ಕಳೆದ ವರ್ಷದ ಪಾಸಿನ ಜೊತೆಗೆ ಪ್ರಸಕ್ತ ವರ್ಷದ ಭೋಧನಾ ಶುಲ್ಕ ರಸೀದಿ ಅಥವಾ ಶಾಲಾ/ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗುವುದು.

ವಿದ್ಯಾರ್ಥಿಗಳು ನೂತನ ಶಾಲೆ/ಕಾಲೇಜುಗಳಿಗೆ ಸೇರ್ಪಡೆಯಾಗಿದ್ದು, ಹಿಂದಿನ ವರ್ಷದ ಬಸ್ ಪಾಸ್ ಇಲ್ಲದ ಸಂದರ್ಭದಲ್ಲಿ ನೂತನ ಶಾಲೆ/ಕಾಲೇಜಿಗೆ ಸೇರ್ಪಡೆಯಾಗಿರುವ ಭೋಧನಾ ಶುಲ್ಕ ರಸೀದಿ ಅಥವಾ ಶಾಲಾ/ಕಾಲೇಜಿನಿಂದ ವಿತರಣೆ ಮಾಡಿರುವ ಗುರುತಿನ ಚೀಟಿಯನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಂಗಳೂರು ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.