ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 85 ಅಂಕ ಗಳಿಸಿದ ‘ಸಿ’ ವರ್ಗದ ಸದಸ್ಯರ ಮಕ್ಕಳು, ದ್ವಿತೀಯ ಪಿಯುಸಿ/ ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ. 80 ಅಂಕಗಳಿಸಿದ ವಿದ್ಯಾರ್ಥಿಗಳು ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಶೇ. 90 ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ. 85 ಅಂಕ ಗಳಿಸಿದ ಸಾಮಾನ್ಯ ವರ್ಗದವರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ನೀಡಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.
ಸೆಪ್ಟೆಂಬರ್ 15 ರೊಳಗೆ ಅರ್ಜಿ ನಮೂನೆಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್ ನ ಶಾಖಾ ಕಚೇರಿಗಳಿಂದ ಪಡೆದುಕೊಳ್ಳಬಹುದು ಎಂದು ಫೆಡರೇಶನ್ ಅಧ್ಯಕ್ಷ ಯಶ್‍ಪಾಲ್ ಎ. ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.