ಉಡುಪಿ: ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಡಿಸೆಂಬರ್ 19 ರಂದು ಬೈಂದೂರು ಪ್ರವಾಸಿ ಮಂದಿರ, ಡಿ. 20 ರಂದು ಬ್ರಹ್ಮಾವರದ ಚಾಂತಾರು ಗ್ರಾಮ ಪಂಚಾಯತ್ ಸಭಾಂಗಣ, ಡಿ. 21 ರಂದು ಹೆಬ್ರಿ ತಾಲೂಕು ಕಚೇರಿ, ಡಿ. 22 ರಂದು ಕಾರ್ಕಳ ಪ್ರವಾಸಿ ಮಂದಿರ, ಡಿ. 26 ರಂದು ಕುಂದಾಪುರ ಪ್ರವಾಸಿ ಮಂದಿರ ಹಾಗೂ ಡಿ. 27 ರಂದು ಕಾಪು ಪುರಸಭೆ ಕಚೇರಿ ಆವರಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಲೋಕಾಯುಕ್ತ ಕಾಯ್ದೆಯಡಿ ದಾಖಲಾಗುವ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.
ಇನ್ನುಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881 ಹಾಗೂ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2536661 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.