ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರಾಧಿಕಾರ ರಚಿಸುವ ಬಗ್ಗೆ ಶೀಘ್ರವೇ ನಿರ್ಧಾರ: ಸಚಿವ ಕೋಟ 

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿ ಬದಲು, ಪ್ರಾಧಿಕಾರ ರಚಿಸುವ ಕುರಿತಂತೆ ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸುಬ್ರಹ್ಮಣ್ಯ ಸಮೀಪದ ಬಳ್ಪ ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.
ರಾಜ್ಯದ 80ಕ್ಕೂ ಅಧಿಕ ‘ಎ’ ದರ್ಜೆ ದೇವಸ್ಥಾನಗಳ ವ್ಯವಸ್ಥಾಪನಾ ರಚನೆಯ ಪ್ರಕ್ರಿಯೆಯು ಅಂತಿಮ ಹಂತದಲ್ಲಿದ್ದು, ವಾರದಲ್ಲಿ ಅಧಿಕೃತ ಪ್ರಕಟಣೆ ಹೊರಬೀಳಲಿದೆ’ ಎಂದರು.
ದೇವಸ್ಥಾನಗಳಲ್ಲಿ ಸೇವೆಗಳನ್ನು ಆರಂಭಿಸುವ ಬಗ್ಗೆ ಆರೋಗ್ಯ ಇಲಾಖೆ ಜೊತೆ ಚರ್ಚಿಸಲಾಗುವುದು. ಈ ಬಾರಿ ಸಾರ್ವಜನಿಕ  ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ. ಆದರೆ, ದೇವಸ್ಥಾನಗಳಲ್ಲಿ ಆಚರಿಸುವ ಬಗ್ಗೆ ಚರ್ಚಿಸಿ, ತಿಳಿಸಲಾಗುವುದು’ ಎಂದು ಹೇಳಿದರು.