ಕೋಟ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ, ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟ ಪಡುಕೆರೆ ಕಾಲೇಜಿನಲ್ಲಿ ಆಯೋಜಿಸಲಾದ ಮತ್ಸ್ಯ ಮೇಳ-2023 ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಘಟಕದ 500 ಹೊಸ ಘಟಕವನ್ನು ಸ್ಥಾಪಿಸಲು ಹಾಗೂ ಚಾಲ್ತಿಯಲ್ಲಿರುವ ಘಟಕಕ್ಕೂ ಸಹಾಯಧನ ಪಡೆಯುವ ಬಗ್ಗೆ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ವಿವೇಕ್ ಆರ್. ಪ್ರಸ್ತಾಪಿಸಿರುತ್ತಾರೆ.
ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಘಟಕದಲ್ಲಿ “ಒಂದು ಜಿಲ್ಲೆ ಒಂದು ಉತ್ಪನ್ನ” ಎಂಬ ಆಶಯದಡಿ ಮೀನಿನ ಮೌಲ್ಯವರ್ಧಿತ ಪದಾರ್ಥಗಳು ಮತ್ತು ಆದ್ಯತೆಯ ಮೇರೆಗೆ ಇತರ ಪದಾರ್ಥಗಳಾದ ತೆಂಗಿನ ಎಣ್ಣೆ ಘಟಕ, ಹಿಟ್ಟಿನ ಗಿರಣಿ, ಬೇಕರಿ ಉತ್ಪನ್ನ, ಮಸಾಲ ಪದಾರ್ಥಗಳು, ಹಪ್ಪಳ, ಸಂಡಿಗೆ, ಉಪ್ಪಿನಕಾಯಿ ಮತ್ತು ಮನುಷ್ಯರು ಹಾಗೂ ಪ್ರಾಣಿಗಳು ಸೇವಿಸುವ ಎಲ್ಲಾ ಸಂಸ್ಕರಿಸಿದ ಆಹಾರ ಪದಾರ್ಥಗಳಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಜಿಲ್ಲಾ ಸಂಪನ್ಮೂಲ ವ್ಯಕ್ತಿಗೆ ಮೊಬೈಲ್ ಮುಖಾಂತರ ಅಗತ್ಯ ದಾಖಲಾತಿಗಳನ್ನು ನೀಡಿ, ಬ್ಯಾಂಕ್ ಸಾಲದೊಂದಿಗೆ ಶೇ.50 ರಷ್ಟು ಸಹಾಯಧನವನ್ನು ಪಡೆಯಬಹುದು. ಆಸಕ್ತ ಉದ್ಯಮಿದಾರರು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸೂರಜ್ ಶೆಟ್ಟಿ ಮೊ: 9019075051 ಅನ್ನು ಸಂಪರ್ಕಿಸಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.