ಉಡುಪಿ: ಪಶುಪಾಲನಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಇತರೆ ಫಲಾನುಭವಿಗಳಿಗೆ ಶೇ.25 ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.33.33 ಸಹಾಯಧನದಡಿ ಮಿಶ್ರತಳಿ ಹಾಲು ಕರೆಯುವ ಹಸು ಘಟಕ ಪ್ರಾರಂಭಿಸುವ ಯೋಜನೆ ಅನುಷ್ಠಾನಗೊಳಿಸಲು ಪ.ಜಾತಿ, ಪ.ಪಂಗಡ, ಇತರೆ ಕೂಲಿ ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು 2023 ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿ ಅಥವಾ ಸಮೀಪದ ಪಶುವೈದ್ಯಕೀಯ ಸಂಸ್ಥೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.