ಶ್ರೀ ವೆಂಕಟರಮಣ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಯಶಸ್ವಿ ಥ್ರೋಬಾಲ್ ಪಂದ್ಯಾಟ.

ಕುಂದಾಪುರ: ಸೆಪ್ಟೆಂಬರ್ 18 ರಂದು ಶಾಲಾ ಶಿಕ್ಷಣ ಇಲಾಖೆ (ಉಡುಪಿ ಜಿಲ್ಲೆ ) ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ- ಬಾಲಕಿಯರ ಥ್ರೋಬಾಲ್ ಪಂದ್ಯಾಟವನ್ನು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೇರಿಸಲಾಯಿತು.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಇದರ ಕ್ರೀಡಾ ಸಂಯೋಜಕರಾದ ಶ್ರೀ ದಿನೇಶ್ ಕುಮಾರ್ ಶೆಟ್ಟಿ ದೀಪ ವನ್ನು ಪ್ರಜ್ವಲಿಸಿ, ವಿದ್ಯಾರ್ಥಿಗಳು ಕ್ರೀಡೆ ಯಲ್ಲಿ ಕ್ರೀಡಾ ಸ್ಪೂರ್ತಿಯಿಂದ ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಕ್ರೀಡೆಯ ಮೆರುಗನ್ನು ಹೆಚ್ಚಿಸುವಂತಾಗಬೇಕು ಎಂದು ಆಶಿಸಿದರು.

ಅಧ್ಯಕ್ಷತೆಯನ್ನು ವಹಿಸಿದ ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಯವರು ಸೋಲೇ ಗೆಲುವಿನ ಮೆಟ್ಟಿಲು ಸೋಲು ತಾತ್ಕಾಲಿಕ ಸೋಲು ಮುಂದಿನ ಯಶಸ್ಸಿಗೆ ದಾರಿ ಮಾಡಿಕೊಡುತ್ತದೆ ಎಂದು ಶುಭಹಾರೈಸಿದರು.

ಸಮಾರಂಭದಲ್ಲಿ ಅತಿಥಿಗಳಾಗಿ ಉಡುಪಿ ಜಿಲ್ಲಾ ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷರಾದ ಜೀವನ್ ಕುಮಾರ್ ಶೆಟ್ಟಿ, ಕುಂದಾಪುರ ದೈಹಿಕ ಶಿಕ್ಷಣ ಸಂಘದ ಸಂಯೋಜಕರಾದ ರಾಮ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕಾರ್ಯದರ್ಶಿಗಳಾದ ಸುಕೇಶ್ ಶೆಟ್ಟಿ, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ವೀಕ್ಷಕರಾಗಿ ಆಗಮಿಸಿದ ವಿಜಯ ಕುಮಾರ್,ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಶ್ರೀ ವೆಂಕಟರಮಣ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದರು.

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಸ್ವಾಗತಿಸಿದರು, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ವಂದಿಸಿದರು, ಇಂಗ್ಲೀಷ್ ಉಪನ್ಯಾಸಕಿ ಅಮೃತಾ ಕಾರ್ಯಕ್ರಮ ನಿರೂಪಿಸಿದರು.

ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕಾಪು ತಾಲೂಕು, ಬಾಲಕರ ವಿಭಾಗದಲ್ಲಿ ಕುಂದಾಪುರ ಪ್ರಥಮ ಸ್ಥಾನವನ್ನು ಪಡೆದುಕೊಂಡು ಉಡುಪಿ ಜಿಲ್ಲೆಯಿಂದ ರಾಜ್ಯ ಮಟ್ಟದಲ್ಲಿ ನಡೆಯುವ ಪಂದ್ಯಾಟಕ್ಕೆ ಅರ್ಹತೆ ಪಡೆದಿದ್ದಾರೆ. ಸಮಾರೋಪ ಸಮಾರಂಭದ ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಘವೇಂದ್ರ ಗಾಣಿಗ ನಿರ್ವಹಿಸಿದರು.