ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ನೂತನ ಜಿಲ್ಲಾಧ್ಯಕ್ಷರಾಗಿ ಸುದರ್ಶನ ಎಂ. ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಆಯ್ಕೆ ಪ್ರಕ್ರಿಯೆಯು ರಾಜ್ಯ ಚುನಾವಣಾ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾಣ ಮತ್ತು ಜಿಲ್ಲಾ ಚುನಾವಣಾಧಿಕಾರಿ ಕೆ.ಉದಯ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಮಂಗಳೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಜಿಲ್ಲೆಯ ನಿಕಟ ಪೂರ್ವ ಅಧ್ಯಕ್ಷರು ಶಾಸಕರುಗಳು, ವಿಭಾಗ ಪ್ರಭಾರಿ, ಸಹ ಪ್ರಭಾರಿ, ಚುನಾವಣಾ ವೀಕ್ಷಕರು, ನೂತನ ಮಂಡಲ ಅಧ್ಯಕ್ಷರುಗಳು ಉಪಸ್ಥಿತರಿದ್ದರು.