ನವದೆಹಲಿ: ಲೇಖಕಿ, ಸಮಾಜ ಸೇವಕಿ, ಇನ್ಫೋಸಿಸ್ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ ಅವರು ಇಂದು ಗುರುವಾರ ದೆಹಲಿಯಲ್ಲಿ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಅವರು ತಮ್ಮ ಮಾತೃಭಾಷಾ ಒಲವನ್ನು ವ್ಯಕ್ತಪಡಿಸಿದರು.
ಮೂಲತಃ ಇಂಜಿನಿಯರ್ ಆಗಿರುವ ಸುಧಾ ಮೂರ್ತಿ ಅವರು ತಮ್ಮ ಪತಿ ಎನ್ ಆರ್ ನಾರಾಯಣ ಮೂರ್ತಿ ಅವರ ಸಮ್ಮುಖದಲ್ಲಿ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಸಂಸತ್ ಭವನದ ತಮ್ಮ ಕಚೇರಿಯಲ್ಲಿ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಸಭಾನಾಯಕ ಪಿಯೂಷ್ ಗೋಯಲ್ ಕೂಡ ಉಪಸ್ಥಿತರಿದ್ದರು.