ಮಂಚಿ: ಇಲ್ಲಿನ ರಾಜೀವನಗರದ ಸುಂದರ್ ಅಮೀನ್ ಎಂಬವರ ಮನೆಯಲ್ಲಿ ಹೆಬ್ಬಾವೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಾದ ಸುಧೀರ್ ಶೇರಿಗಾರ್ ರಾಜೀವನಗರ ಅವರು ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
ಮಂಚಿ- ರಾಜೀವನಗರ ಪರಿಸರದಲ್ಲಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಹೆಬ್ಬಾವುಗಳು ಪತ್ತೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಈ ಹಿಂದೆ ರಾಜೀವನಗರ ಆರನೇ ಅಡ್ಡರಸ್ತೆಯಲ್ಲಿ ಎರಡು ಬಾರಿ ಬೃಹತ್ ಹೆಬ್ಬಾವು ಪತ್ತೆಯಾಗಿದ್ದು, ಅವುಗಳನ್ನು ಸುಧೀರ್ ಅವರು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದರು. ಆ ಮೂಲಕ ಸ್ಥಳೀಯರ ಆತಂಕವನ್ನು ದೂರ ಮಾಡಿದ್ದರು.