ಉಡುಪಿ: ಉಡುಪಿ ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ರೋಟರಿ ಮಣಿಪಾಲ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗ ದಲ್ಲಿ ಡಿವಿಜಿ ಪುಣ್ಯ ಸ್ಮರಣೆ ಪ್ರಯುಕ್ತ ಮಾಧ್ಯಮದವರಿಗೆ ‘ಆತ್ಮಹತ್ಯೆ ನಿಯಂತ್ರಣ: ಸಾಮಾಜಿಕ ಜವಾಬ್ದಾರಿ’ ವಿಷಯದ ಕುರಿತ ವಿಚಾರ ಸಂಕಿರಣವನ್ನು ಗುರುವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಹಾಗೂ ಹಿರಿಯ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಹಾಗೂ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಮ್ಯೂ ನಿಕೇಶನ್ ಇದರ ಮಾಧ್ಯಮ ಅಧ್ಯಯನ ಕೇಂದ್ರದ ಮುಖ್ಯಸ್ಥೆ ಮತ್ತು ಸಹ ಪ್ರಾಧ್ಯಾಪಕಿ ಡಾ.ಶುಭ ಎಚ್.ಎಸ್. ಮಾತನಾಡಿದರು.
ಉಡುಪಿ ವಾರ್ತಾಧಿಕಾರಿ ಮಂಜುನಾಥ್, ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಮಣಿಪಾಲ ರೋಟರಿ ಕ್ಲಬ್ನ ಪ್ರಶಾಂತ್ ಹೆಗ್ಡೆ, ಶ್ರೀಪತಿ, ನಾಗರಾಜ್ ಮೂರ್ತಿ ಉಪಸ್ಥಿತರಿದ್ದರು.
ಮಣಿಪಾಲ ರೋಟರಿ ಅಧ್ಯಕ್ಷ ಹಾಗೂ ಮನೋ ವೈದ್ಯ ಡಾ.ವಿರೂಪಾಕ್ಷ ದೇವರಮನೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು.