ಕುಂದಾಪುರ : ಬಿ.ಎಂ.ಸುಕುಮಾರ್ ಶೆಟ್ಟಿ ಸನ್ಮಾನ ಕಾರ್ಯಕ್ರಮ

ಕುಂದಾಪುರ: ಪರಿಶ್ರಮ ಇದ್ದಾಗ ಮಾತ್ರ ಸಾಧನೆ ಶಿಖರವೇರಲು ಸಾಧ್ಯ ಎನ್ನುವುದಕ್ಕೆ ಸುಕುಮಾರ ಶೆಟ್ಟಿ ಅವರು ಬಹುದೊಡ್ಡ ಉದಾಹರಣೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಹೇಳಿದರು.

ಕುಂದಾಪುರ ಎಜ್ಯುಕೇಶನ್ ಸೊಸೈಟಿ ಮತ್ತು ಬಿ.ಎಂ.ಸುಕುಮಾರ್ ಶೆಟ್ಟಿ ಅಭಿಮಾನಿ ಬಳಗ ಇಲ್ಲಿನ ಡಾ.ಬಿ.ಬಿ.ಹೆಗ್ಡೆ ಕಾಲೇಜು ಮೈದಾನದಲ್ಲಿ ಶನಿವಾರ ಆಯೋಜಿಸಿದ ವಿಶಿಷ್ಟ ಸಾಧಕ ಬಿ.ಎಂ.ಸುಕುಮಾರ್ ಶೆಟ್ಟಿ ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸುಕುಮಾರ್ ಶೆಟ್ಟಿಯವರು ತಮ್ಮ ಶಿಕ್ಷಣ ಸಂಸ್ಥೆಗಳ ಮೂಲಕ ಸಾಮಾಜಿಕ ಕೆಲಸ ಮಾಡುತ್ತಿದ್ದಾರೆ. ತಾನೂ ಬೆಳೆಯುವ ಜೊತೆ ಮತ್ತೊಬ್ಬರನ್ನು ಬೆಳೆಯಲು ದಾರಿ ಮಾಡಿ ಕೊಡುತ್ತಿದ್ದಾರೆ ಎಂದರು.

ಸುಕುಮಾರ್ ಶೆಟ್ಟಿಯವರು ಸನ್ಮಾನ ಸ್ವೀಕರಿಸಿ ಮಾತನಾಡಿದರು. ಮಣಿಪಾಲ ವಿವಿ ಉಪಕುಲಾಧಿಪತಿ ಡಾ.ಹೆಚ್.ಎಸ್.ಬಲ್ಲಾಳ್, ಬಸ್ರೂರು ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ, ಕುಂದಾಪುರ ಭಂಡಾರ್‌ಕರ್ಸ್ ಕಾಲೇಜು ಆಡಳಿತಾಧಿಕಾರಿ ಡಾ.ಹೆಚ್.ಶಾಂತಾರಾಮ್ ಮಾತನಾಡಿದರು.

ಕುಂದಾಪುರ ಎಜ್ಯುಕೇಶನ್ ಸೊಸೈಟಿ ಉಪಾಧ್ಯಕ್ಷ ಸೊಲೊಮನ್ ಸೋನ್ಸ್, ಸದಸ್ಯರಾದ ಕೇಶವ ಪ್ರಭು, ವಿನುತಾ ಪಿ.ರೈ, ಡಾ.ಎಂ.ಸಚ್ಚಿದಾನಂದ ಶೆಟ್ಟಿ, ಡಾ.ವೈ.ಎಸ್.ಹೆಗ್ಡೆ ಇದ್ದರು.

ಕುಂದಾಪುರ ಎಜ್ಯುಕೇಶನ್ ಸೊಸೈಟಿ ಸದಸ್ಯ ಡಾ.ಎಂ.ವಿ.ಕುಲಾಲ್ ಸ್ವಾಗತಿಸಿದರು. ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಪ್ರಾಸ್ತಾವಿಕ ಮಾತನಾಡಿದರು. ಜೊತೆ ಕಾರ್ಯದರ್ಶಿ ಕೆ.ಸುಧಾಕರ ಶೆಟ್ಟಿ ಬಾಂಡ್ಯಾ, ಮ್ಯಾನೇಜಿಂಗ್ ಕಮಿಟಿ ಸದಸ್ಯ ಬಿ.ಅರುಣ್ ಕುಮಾರ್ ಶೆಟ್ಟಿ ಅತಿಥಿಗಳ ಪರಿಚಯಿಸಿದರು. ಡಾ.ಬಿ.ಬಿ.ಹೆಗ್ಡೆ ಕಾಲೇಜು ನಿರ್ದೇಶಕ ಪ್ರೊ.ದೋಮ ಚಂದ್ರಶೇಖರ್ ವಂದಿಸಿದರು. ಉಪನ್ಯಾಸಕಿ ಅಮೃತಾ ನಿರೂಪಿಸಿದರು.