ಕೋಟ: ವಿವೇಕ ಬಾಲಕಿಯರ ಫ್ರೌಢಶಾಲೆಯ ಆವರಣದ ಸ್ವರ್ಣಭವನದಲ್ಲಿ ಹಮ್ಮಿಕೊಳ್ಳಲಾದ ಮಕ್ಕಳ ದಿನಾಚರಣೆ ಅಂಗವಾಗಿ ಬೆಂಗಳೂರು ಅಂತರಾಷ್ಟೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಕಾರಂತ ಜೀವನ ಪ್ರೇರಿತ ಮಕ್ಕಳ ಚಲನಚಿತ್ರ ಸುಗಂಧಿ ಇದರ ಉಚಿತ ಪ್ರದರ್ಶನ ಸಪ್ತಾಹ ಕಾರ್ಯಕ್ರಮವು ಸೋಮವಾರದಂದು ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಇಂದು
ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ಸಾಧನೆ ಮಾಡಿದ್ದಾರೆ ಎಂದರು.
ಕನ್ನಡ ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಸುಗಂಧಿ ಚಲನಚಿತ್ರವು ಕಲೆಯಲ್ಲಿನ ಮೌಢ್ಯವನ್ನು ಎತ್ತಿ ಹಿಡಿಯುವಂತಿದೆ. ಚಿತ್ರವು ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು ಹೀಗೆಯೇ ಮುಂದುವರೆಯಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಯವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕಾರಂತ ಪ್ರತಿಷ್ಠಾನದ ಕಾರ್ಯಧ್ಯಕ್ಷ ಆನಂದ ಸಿ ಕುಂದರ್, ಅಧ್ಯಕ್ಷೆ ಅಶ್ವಿನಿ ದಿನೇಶ್, ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವುಡ ,ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ರಾಜೇಶ್ ಗಾಣಿಗ, ಕೋಟ ವಿವೇಕ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಮಂಜುನಾಥ್ ಉಪಾಧ್ಯ, ಪ್ರಾಧ್ಯಪಕ ಪ್ರೇಮಾನಂದ್ ಉಪಸ್ಥಿತರಿದ್ದರು.
ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರಕುಮಾರ್ ಕೋಟ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.












