ಕಾರ್ಕಳ: ಸಿದ್ದರಾಮಯ್ಯ ಸಾವರ್ಕರ್ ಬಗ್ಗೆ ಅಗೌರವದ ಮಾತನಾಡಿದ್ದಾರೆ. ಸಾವರ್ಕರ್ ಬ್ರಿಟಿಷರ ವಿರುದ್ಧ ಹೋರಾಡಿದವರು. ಸಿದ್ದರಾಮಯ್ಯ ಸಾವರ್ಕರ್ ಅವರ ಪಾದದ ಧೂಳಿಗೂ ಸಮವಲ್ಲ ವಿಧಾನಸಭೆಯ ಮುಖ್ಯ ಸಚೇತಕ ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ್ಕಳದಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿ ಹತ್ಯೆಗೆ ಯೋಜನೆ ರೂಪಿಸಿದ್ದರು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ದೇಶಾಭಿಮಾನಿಗಳಿಗೆ ಗೌರವ ಕೊಡುವ ಗುಣ ಕಾಂಗ್ರೆಸ್ ಅವರ ರಕ್ತದಲ್ಲೇ ಇಲ್ಲ. ನೂರಾರು ಹೋರಾಟಗಾರರಿಗೆ ಕಾಂಗ್ರೆಸ್ ಅಪಮಾನ ಮಾಡುತ್ತಲೇ ಬಂದಿದೆ. ಸಿದ್ದರಾಮಯ್ಯ ಇತಿಹಾಸ ತಿಳಿಯದ ಉಡಾಫೆ ಮಾತನಾಡುವ ವ್ಯಕ್ತಿ. ಈ ರೀತಿಯ ಹೇಳಿಕೆ ನೀಡಿರುವುದು ಸರಿಯಲ್ಲ. ವೀರ ಸಾವರ್ಕರ್ ಬಲಿದಾನ ಯುವ ಪೀಳಿಗೆಗೆ ಮಾರ್ಗದರ್ಶಕ. ಸಿದ್ದರಾಮಯ್ಯನವರು ತಮ್ಮ ಹೇಳಿಕೆ ಹಿಂದಕ್ಕೆ ಪಡೆಯಬೇಕು. ಈ ಕೂಡಲೇ ಕ್ಷಮೆ ಯಾಚಿಸಬೇಕು ಎಂದಿದ್ದಾರೆ.