ನವದೆಹಲಿ: ‘ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರವಿಧಾನಗಳ (ಪಿಸಿ–ಪಿಎನ್ಡಿಟಿ) ಕಾಯ್ದೆ ಮತ್ತು ಸಂಬಂಧಿತ ನಿಯಮಗಳ ಪರಿಣಾಮಕಾರಿ ಅನುಷ್ಠಾನ ಕೋರಿ ಸಲ್ಲಿಯಾಗಿದ್ದ ಅರ್ಜಿಗೆ ಪ್ರತಿಕ್ರಿಯೆ ನೀಡಲು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಮತ್ತೆ ನಾಲ್ಕು ವಾರ ಕಾಲಾವಕಾಶ ನೀಡಿದೆ.ಐದು ರಾಜ್ಯಗಳು ತಮ್ಮ ನಿಲುವು ಸ್ಪಷ್ಟಪಡಿಸದ ಕಾರಣ ಸುಪ್ರೀಂ ಕೋರ್ಟ್ ಮಂಗಳವಾರ ಮತ್ತೆ ಗಡುವು ವಿಸ್ತರಿಸಿದೆ.
ಈ ಕುರಿತಂತೆ ಪ್ರತಿಕ್ರಿಯೆ ಸಲ್ಲಿಸಲು ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಪಿಸಿಪಿಎನ್ಡಿಟಿ ಕಾಯ್ದೆಯು ಭ್ರೂಣದ ಲಿಂಗ ಪತ್ತೆಗಾಗಿ ಪ್ರಸವಪೂರ್ವ ಪತ್ತೆ ತಂತ್ರವಿಧಾನಗಳ ಬಳಸುವುದನ್ನು ನಿಷೇಧಿಸುತ್ತದೆ. ಲಿಂಗ ಪತ್ತೆ ನಡೆದಲ್ಲಿ ಅದಕ್ಕೆ ವೈದ್ಯರನ್ನೇ ಹೊಣೆಗಾರರನ್ನಾಗಿ ಮಾಡಲು ಅವಕಾಶ ನೀಡುತ್ತದೆ.












