ಉಡುಪಿ: ಮೂಲತಃ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿದ್ದು, ಉಡುಪಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿರುವ ನ್ಯಾಯಮೂರ್ತಿ ಅರವಿಂದ ಕುಮಾರ್ ಇವರು ಅಕ್ಟೋಬರ್ 2021ರಲ್ಲಿ ಗುಜರಾತ್ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯ ಮೂರ್ತಿಗಳಾಗಿ ನೇಮಕಾತಿಗೊಂಡಿದ್ದು,ಇದೀಗ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪದೋನ್ನತಿ ಹೊಂದಿದ ಇವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಫೆ. 13ರಂದು ಪ್ರಮಾಣ ವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಅವರಿಗೆ ಪುಷ್ಪಗುಚ್ಚ ನೀಡಿ ಉಡುಪಿ ವಕೀಲರ ಸಂಘದ ವತಿಯಿಂದ ಅಭಿನಂದಿಸಲಾಯಿತು.
ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್, ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್, ವಕೀಲರ ಸಂಘದ ಮಾಜಿ ಅಧ್ಯಕ್ಷ ಟಿ. ವಿಜಯ ಕುಮಾರ್ ಶೆಟ್ಟಿ, ಹಿರಿಯ ವಕೀಲರುಗಳಾದ ಆನಂದ ಮಡಿವಾಳ, ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು.