ದ್ವೇಷ ಹರಡುವ, ನಕಲಿ ಸುದ್ದಿ ತಡೆಗೆ ಅರ್ಜಿ: ಕೇಂದ್ರ ಸರ್ಕಾರ, ಟ್ವೀಟರ್ ಗೆ ಸುಪ್ರೀಂ ಕೋರ್ಟ್ ನೋಟಿಸ್

ದೆಹಲಿ: ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಸುಳ್ಳು ಸುದ್ದಿ, ದ್ವೇಷ ಹರಡುವುದು ಹಾಗೂ ಪ್ರಚೋದನಕಾರಿ ಸಂದೇಶಗಳನ್ನು ಹರಡಲಾಗುತ್ತಿದೆ. ಇದನ್ನು ತಡೆಗಟ್ಟಲು ಸೂಕ್ತ ವ್ಯವಸ್ಥೆ ಜಾರಿಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆ ಕೇಳಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಟ್ವಿಟರ್ ಗೆ ನೊಟೀಸ್ ಜಾರಿ ಮಾಡಿದೆ.

ನ್ಯಾ.ಎಸ್ಎ ಬೋಬ್ಡೆ ಹಾಗೂ ನ್ಯಾ. ಎಎಸ್ ಬೋಪಣ್ಣ ಹಾಗೂ ನ್ಯಾ. ವಿ ರಾಮ ಸುಬ್ರಹ್ಮಣಿಯನ್ ಅವರಿದ್ದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಕೇಂದ್ರ ಸರ್ಕಾರ ಹಾಗೂ ಟ್ವಿಟರ್ ಕಮ್ಯುನಿಕೇಷನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಗೆ ನೊಟೀಸ್ ಜಾರಿಗೊಳಿಸಿದೆ.

ವಿನಿತಾ ಗೋಯೆಂಕಾ ಎಂಬುವವರು ಟ್ವಿಟರ್, ಫೇಸ್ ಬುಕ್ ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಖ್ಯಾತ ನಾಮರ ಹೆಸರಿನಲ್ಲಿ ನಕಲಿ ಖಾತೆಗಳ ಮೂಲಕ ದ್ವೇಷ ಹರಡುವುದು ಹಾಗೂ ಪ್ರಚೋದನಕಾರಿ ಸಂದೇಶಗಳಿಗೆ ಕಡಿವಾಣ ಹಾಕುವುದಕ್ಕಾಗಿ ವ್ಯವಸ್ಥೆಗೆ ಕೋರಿ ಅರ್ಜಿ ಸಲ್ಲಿಸಿದ್ದರು.