ಸುರತ್ಕಲ್: ಸಮುದ್ರದ ಅಲೆಗಳ ಅಬ್ಬರಕ್ಕೆ ದೋಣಿ ಪಲ್ಟಿ, ಆರು ಮಂದಿ ಮೀನುಗಾರರ ರಕ್ಷಣೆ

ಮಂಗಳೂರು: ಸಮುದ್ರದ ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ದೋಣಿ ಪಲ್ಟಿಯಾದ ಪರಿಣಾಮ ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರು ಸಮುದ್ರಕ್ಕೆ ಬಿದ್ದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪ ನಡೆದಿದೆ.

ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯಲ್ಲಿ ಆಂಧ್ರಪ್ರದೇಶ ಮೂಲದ ಆರು ಮಂದಿ ಮೀನುಗಾರರಿದ್ದರು. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಪ್ರಬಲ ಅಲೆಗಳ ಹೊಡೆತಕ್ಕೆ ದೋಣಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ದೋಣಿ ಪಲ್ಟಿಯಾದ ತೀವ್ರತೆಗೆ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದು, ಸ್ಥಳೀಯ ಮೀನುಗಾರರು ಕೂಡಲೇ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿ, ಅಪಾಯದಲ್ಲಿದ್ದ ಎಲ್ಲಾ ಆರು ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.