ಬಬ್ಬುಸ್ವಾಮಿ ದೈವಸ್ಥಾನಕ್ಕೆ ಭೇಟಿ ನೀಡಿದ ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ

ಉಡುಪಿ: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾದ ಗುರ್ಮೆ ಸುರೇಶ್ ಶೆಟ್ಟಿಯವರು ಶುಕ್ರವಾರದಂದು ಕೊಂಬಗುಡ್ಡೆ ಮಲ್ಲಾರ್,ಉಚ್ಚಿಲ, ಮುಳೂರ್, ಕಾಪು, ಉಳಿಯಾರಗೋಳಿ, ಕಟಪಾಡಿ ಪೇಟೆಬೆಟ್ಟು, ಗುಡ್ಡೆಯಂಗಡಿ, ಉದ್ಯಾವರ, ಬಬ್ಬುಸ್ವಾಮಿ ದೈವಸ್ಥಾನಗಳಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಲಾಲಾಜಿ ಆರ್ ಮೆಂಡನ್ ಸೇರಿದಂತೆ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.