ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಆತಂಕ ಸೃಷ್ಟಿಸಿದ್ದ ಶಂಕಿತ ಎಬೋಲಾ ಪ್ರಕರಣಕ್ಕೆ ಇದೀಗ ತೆರೆ ಬಿದ್ದಿದೆ. ಉಗಾಂಡಾದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯ ಲ್ಯಾಬ್ ವರದಿ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಸ್ಪಷ್ಟನೆ ನೀಡಿದ್ದಾರೆ.

ಉಗಾಂಡಾದಿಂದ ಬಂದ ಮಹಿಳೆಯಲ್ಲಿ ಎಬೋಲಾ ವೈರಸ್‌ಗೆ ಹೋಲುವ ಕೆಲವು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಬೆಂಗಳೂರಿನ Rajiv Gandhi Institute of Chest Diseases ಆಸ್ಪತ್ರೆಗೆ ದಾಖಲಿಸಿ ಕ್ವಾರಂಟೈನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಮಹಿಳೆಯ ರಕ್ತ ಹಾಗೂ ಇತರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.

ಈಗ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಮಹಿಳೆಗೆ ಎಬೋಲಾ ಸೋಂಕು ತಗುಲಿಲ್ಲ ಎಂದು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಖಚಿತಪಡಿಸಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.